ಹಲವು ವರ್ಷಗಳಿಂದ ಪ್ರೀತಿಸಿ ಮದುವೆಯಾದ ಜೋಡಿ; ಫಸ್ಟ್ ನೈಟ್ ದಿನವೇ ಪತ್ನಿಯ ಮದುವೆ ಸೀರೆಯಿಂದ ನೇಣು ಬಿಗಿದುಕೊಂಡು ವರ ಸಾವು

 

ಚೆನ್ನೈ; ಹಲವು ವರ್ಷಗಳಿಂದ ಪ್ರೀತಿಸಿ ಮದುವೆಯಾದ ಜೋಡಿಯೊಂದರ ಮೇಲೆ ಅದ್ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ಮದುವೆಯಾದ ಎರಡೇ ದಿನಕ್ಕೆ ಮದುಮಗ(ವರ) ಪತ್ನಿಯ ಮದುವೆ ಸೀರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ನಡೆದಿದೆ. ಸರವಣನ್​ ಮೃತ ವ್ಯಕ್ತಿ.

ಸರವಣನ್ ಸುಂಗುವಚತಿರಂನಲ್ಲಿರುವ ಸ್ಯಾಮ್​ಸಂಗ್​ ಮೊಬೈಲ್​ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.ಸರವಣನ್, ಶ್ವೇತಾ ಎಂಬಾಕೆಯನ್ನು ಕೆಲವು ವರ್ಷಗಳಿಂದ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಎರಡು ದಿನಗಳ ಹಿಂದೆ ಮದುವೆಯಾಗಿದ್ದರು.ಮದುವೆಯನ್ನು ಎರಡೂ ಕುಟುಂಬದವರು ಅದ್ಧೂರಿಯಾಗಿ ಏರ್ಪಡಿಸಿದ್ದರು.ಮಂಗಳವಾರ ನವ ದಂಪತಿ ತಮ್ಮ ಮದುವೆಯ ನಂತರ ಮೊದಲ ಬಾರಿಗೆ ದಿಮ್ಮಾವರಂಗೆ ಬಂದಿದ್ದರು. ಅದು ಅವರ ಮೊದಲ ರಾತ್ರಿಯಾಗಿತ್ತು.

ರಾತ್ರಿ 9 ಗಂಟೆಗೆ ದಂಪತಿ ತಮ್ಮ ಕೋಣೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಶ್ವೇತಾಳ ಕಿರುಚಾಟ ಕೇಳಿ ಮನೆಯವರು ಬೆಚ್ಚಿಬಿದ್ದಿದ್ದಾರೆ.ಶ್ವೇತಾ ಕೋಣೆಯಿಂದ ಹೊರಗೆ ಓಡಿ ಪ್ರಜ್ಞೆ ತಪ್ಪಿ ಬಿದ್ದಳು. ಆಕೆಯ ಪಾಲಕರು ಕೊಠಡಿಯೊಳಗೆ ಹೋಗಿ ನೋಡಿದಾಗ ಶ್ವೇತಾಳ ಮುಹೂರ್ತದ ಸೀರೆಯನ್ನು ಬಳಸಿ ಸರವಣನ್ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.ಚೆಂಗಲ್ಪಟ್ಟು ತಾಲೂಕು ಪೊಲೀಸರ ತಂಡ ಆತನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಜಿಎಚ್‌ಗೆ ಕಳುಹಿಸಿದ್ದಾರೆ‌‌.

ಸರವಣನ್​ ಸಾವು ನಿಗೂಢವಾಗಿದೆ. ಚೆಂಗಲಪಟ್ಟು ತಾಲೂಕು ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಶ್ವೇತಾ ಮತ್ತು ಆಕೆಯ ಪೋಷಕರನ್ನು ವಿಚಾರಣೆ ನಡೆಸುತ್ತಿದ್ದಾರೆ.

 

Leave A Reply

Your email address will not be published.