ನಾಳೆಯಿಂದ ಸೆ.30 ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಣೆ

\.

ಬೆಂಗಳೂರು: ನಾಳೆಯಿಂದ ಸೆಪ್ಟೆಂಬರ್ 30 ರವರೆಗೆ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಕಾರ್ಯ ನಿರ್ವಹಿಸಲಿವೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ

ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆಪ್ಟೆಂಬರ್ 23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಸೆಪ್ಟೆಂಬರ್ 23 ನಾಲ್ಕನೇ ಶನಿವಾರದಂದೂ ಕೂಡಾ ಈ ಅವಧಿಯಲ್ಲಿ ಕಚೇರಿ ಕಾರ್ಯ ನಿರ್ವಹಿಸಲಿದ್ದು, ಈ ಕೆಲಸದ ಅವಧಿಯು ಸೆಪ್ಟೆಂಬರ್ 30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.

Leave A Reply

Your email address will not be published.