ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಸೋಣಂದೂರಿನಲ್ಲಿ ನಡೆದಿದೆ.ಸೋಣಂದೂರು ಮುಂಡಾಡಿ ಮನೆಯ ಪ್ರಶಾಂತ್‌ ಮೃತ ಯುವಕ.

ಪ್ರಶಾಂತ್ ಸೆ.18ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ‌. ಕೂಡಲೇ ಮನೆಯವರು ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ.

ಘಟನೆಯ ಬಗ್ಗೆ ಮೃತನ ಸಂಬಂಧಿಯಾಗಿರುವ ಪ್ರತೀಕ್‌ ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

Leave A Reply

Your email address will not be published.