ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ; ಮನನೊಂದು ಸಾವಿನ ಮನೆಯ ಕದ ತಟ್ಟಿದ ದಂಪತಿ

ಉತ್ತರಪ್ರದೇಶ; ಪತ್ನಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದರಿಂದ ಮನನೊಂದು ದಂಪತಿ ಸಾವಿಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ.

ಸೆಪ್ಟೆಂಬರ್ 21ರಂದು ರಾತ್ರಿ ಪತ್ನಿಯ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದರು ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಇದರಿಂದ ಮನನೊಂದ ದಂಪತಿ ದಾರಿ ಕಾಣದೇ ಆತ್ಮಹತ್ಯೆಯ ಹಾದಿ ತುಳಿದಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮುನ್ನ ದಂಪತಿ ವಿಡಿಯೊ ಚಿತ್ರೀಕರಿಸಿದ್ದು, ಆರೋಪಿಗಳ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಸಹೋದರ ನೀಡಿದ ದೂರಿನ ಮೇರೆಗೆ ಆರೋಪಿಗಳಾದ ಆದರ್ಶ (25) ಮತ್ತು ತ್ರಿಲೋಕಿ (47)  ವಿರುದ್ಧ ಭಾರತೀಯ ದಂಡಸಂಹಿತೆ ಸೆಕ್ಷನ್ 376 ಡಿ ಮತ್ತು 306ರ ಅನ್ವಯ ಸಾಮೂಹಿಕ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ದಿನವೇ ಪತಿ ಮೃತಪಟ್ಟಿದ್ದರೆ, ಪತ್ನಿ ಗೋರಖ್ ಪುರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ .

Leave A Reply

Your email address will not be published.