ಉಡುಪಿ; ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗಲೇ ವ್ಯಕ್ತಿ ಸಾವು

Udupi news man died when talking in phone

 

Udupi; ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗಲೇ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ (malpe, Udupi). ಮಲ್ಪೆ ಕೊಪ್ಪಲತೋಟದ ಶಂಕರ್‌ ಕುಂದರ್‌ (63) ಮೃತ ದುರ್ದೈವಿ.  ಶಂಕರ್ ಅವರು ರಾತ್ರಿ ಮನೆಯಲ್ಲಿ ಊಟ ಮಾಡಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು.

ಈ ವೇಳೆ ತೀವ್ರ ಅಸ್ವಸ್ಥಗೊಂಡ ಮಾತನಾಡದ ಸ್ಥಿತಿಯಲ್ಲಿದ್ದ ಅವರನ್ನು ಮನೆಯವರು ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಹೃದಯಾಘಾತವಾಗಿದೆ ಎಂದು ತಿಳಿಸಿದ್ದಾರೆ. ತಕ್ಷಣ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಆದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು; ನಂದಿನಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

 

Leave A Reply

Your email address will not be published.