Kadaba: ದಕ್ಷಿಣಕನ್ನಡ; ಕಡಬದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಬಿಸಿರೋಡ್ ನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ; ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಚಿಕಿತ್ಸೆ ಫಲಿಸದೇ ಸಾವು

A man who had gone missing from Kadaba found in an unwell condition at bc road

Kadaba: ಕಡಬ(Kadaba) ದಿಂದ ನಾಪತ್ತೆ(Missing)ಯಾಗಿದ್ದ ವ್ಯಕ್ತಿ  ಬಿಸಿರೋಡ್ (BC Road)ನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿ ಕೊನೆಗೆ ಮನೆಯವರು ಆಸ್ಪತ್ರೆ(Hospital) ಗೆ ದಾಖಲಿಸುತ್ತಿದ್ದಂತೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಡಬ ತಾಲೂಕಿನ  ರಾಮಕುಂಜ(Ramakunja) ಹಳೆನೇರೆಂಕಿ(Haleneranki) ಗ್ರಾಮದಲ್ಲಿ ದಿನಸಿ ಅಂಗಡಿ ಮಾಲೀಕ ಆರಾಟಿಗೆ ನಿವಾಸಿ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ(65ವ.)ಯವರು ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.   ಅ.3ರಂದು ಮಧ್ಯಾಹ್ನ ಮೊಬೈಲ್ (Mobile) ಅನ್ನು ಅಂಗಡಿಯಲ್ಲೇ ಬಿಟ್ಟು ತೆರಳಿದ್ದ  ಅವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಹಾಗೂ ಇತರೆಡೆ ಹುಡುಕಾಟ ನಡೆಸಿದ್ದ ಮನೆಯವರು ಉಪ್ಪಿನಂಗಡಿ ಪೊಲೀಸ್ ಠಾಣೆಗೂ ಮಾಹಿತಿ ನೀಡಿದ್ದರು. ಪತ್ತೆಯಾಗದ ಹಿನ್ನೆಲೆಯಲ್ಲಿ ಅ.4ರಂದು ಬೆಳಿಗ್ಗೆ ಮನೆಯವರು ಕಡಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಈ ಮಧ್ಯೆ ಮಧ್ಯಾಹ್ನದ ವೇಳೆಗೆ ಹರೀಶ್ ಅವರು ಅಂಗಡಿಯಲ್ಲಿಯೇ ಬಿಟ್ಟು ಹೋಗಿದ್ದ ಮೊಬೈಲ್‌ಗೆ ಕರೆ ಮಾಡಿದ ವ್ಯಕ್ತಿಯೋರ್ವರು ಹರೀಶ್ ಪೂಜಾರಿಯವರು ಬಿ.ಸಿ.ರೋಡ್ ಬಸ್‌ನಿಲ್ದಾಣದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ಮಾಹಿತಿ ನೀಡಿದ್ದರು.

ಮನೆಯವರು ಬಿ.ಸಿ.ರೋಡ್‌ಗೆ ಹೋಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಅಭಿನವ ಹಾಲಶ್ರೀ ವಿರುದ್ಧ ಮತ್ತೊಂದು ಪ್ರಕರಣ ದಾಖಲು ಸ್ವಾಮೀಜಿಯನ್ನು ಕರೆದುಕೊಂಡು ಹೋಗಿ ಪೊಲೀಸರಿಂದ ಸ್ಥಳ ಮಹಜರು

Leave A Reply

Your email address will not be published.