Dakshinakannada: ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆ ಸಾವು

power shock lady died in sullia

Dakshinakannada: ಮನೆಯಲ್ಲಿ ಇನ್ವರ್ಟರ್(Inverter) ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸುಳ್ಯ(Sullia)ದ ನೆಲ್ಲೂರು ಕೆಮ್ರಾಜೆ‌ ಎಂಬಲ್ಲಿ ನಡೆದಿದೆ.ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55) ಮೃತ ದುರ್ದೈವಿ.

ಲಲಿತಾ ರಾತ್ರಿ ಮಲಗುನ ಮುನ್ನ ಇನ್ವರ್ಟರ್ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್ ನ್ನು ತೆಗೆದು ಮಲಗುತ್ತಿದ್ದರೆನ್ನಲಾಗಿದೆ.ನಿನ್ನೆ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಷ್ಟಾಗಲೇ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.