Lung cancer screening technology: ರಾಜ್ಯದ 19 ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಉಚಿತ ಕ್ಯಾನ್ಸರ್ ಸ್ಕ್ರೀನಿಂಗ್, ಗುಡ್ ನ್ಯೂಸ್ ಕೊಟ್ಟ ದಿನೇಶ್ ಗುಂಡೂರಾವ್ !

Karnataka news health news implementation of Lung cancer screening technology in 19 district hospitals latest news

Lung cancer screening technology: ರಾಜ್ಯದ 19 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ ಆರ್ಟಿಫಿಷಿಯಲ್ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಅಳವಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಕಾಸ ಸೌಧದಲ್ಲಿ ನಿನ್ನೆ ಗುರುವಾರ ಅಷ್ಟ್ರಾಜೆನಕಾ ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಈ ಸೇವೆ ರಾಜ್ಯದ ಜನರಿಗೆ ಹೆಚ್ಚು ಉಪಯೋಗವಾಗಲಿದೆ ಎಂದರು.

ಶ್ವಾಸಕೋಶದ ಕ್ಯಾನ್ಸರ್( Lung cancer screening technology)ಅನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚುವ AI ಆಧಾರಿತ ತಂತ್ರಜ್ಞಾನವನ್ನ ಅಷ್ಟ್ರಾಜೆನಕಾ ಸಂಸ್ಥೆಯವರು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲು ಮುಂದೆ ಬಂದಿದ್ದಾರೆ. ಈ ಸೇವೆಯನ್ನು ಉಚಿತವಾಗಿ ಒದಗಿಸಲು ಇದೀಗ ರಾಜ್ಯ ಆರೋಗ್ಯ ಇಲಾಖೆಯೊಂದಿಗೆ ಒಡಂಬಡಿಕೆ ಆಗಿದೆ. ಒಂದು ವರ್ಷದವರೆಗೆ ಉಚಿತ ಸೇವೆ ನೀಡಲು ಅಸ್ಟ್ರಾಜೆನಿಕಾ ಸಂಸ್ಥೆಯವರು ಒಪ್ಪಿಕೊಂಡಿದ್ದಾರೆ. ಮೊದಲ ಹಂತದಲ್ಲಿ ರಾಜ್ಯದ 19 ಜಿಲ್ಲಾಸ್ಪತ್ರೆಗಳಲ್ಲಿ ಈ ಸೇವೆ ಲಭ್ಯವಾಗಲಿದೆಯೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಒಂದು ವರ್ಷದ ಪರ್ಫಾರ್ಮೆನ್ಸ್ ನೋಡಿ ಬಳಿಕ ಉಳಿದ ಜಿಲ್ಲೆಗಳಿಗೂ ಈ ಸೇವೆಯನ್ನ ವಿಸ್ತರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ನಾಳೆಯಿಂದಲೇ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ತಂತ್ರಜ್ಞಾನ ಅಳವಡಿಕೆಯಾಗಲಿದೆ. ಎಲ್ಲಾ ಸಾರ್ವಜನಿಕರು ಇದರ ಉಪಯೋಗ ಪಡೆಯುವಂತೆ ಈ ವೇಳೆ ಆರೋಗ್ಯ ಸಚಿವರು ಕರೆ ನೀಡಿದ್ದಾರೆ.

ಒಂದೇ ಬಾರಿಗೆ 29 ರೀತಿಯ ವಿವಿಧ ಶ್ವಾಸಕೋಶದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಯನ್ನು ಪರೀಕ್ಷಿಸುವ Qure.ai ಅಭಿವೃದ್ಧಿಪಡಿಸಿದ AI ಆಧಾರಿತ ಶ್ವಾಸಕೋಶದ ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಇದಾಗಿದೆ ಅಂದು ಅವರು ತಿಳಿಸಿದ್ದಾರೆ. ಡಿಜಿಟಲ್‌ ಎದೆಯ ಎಕ್ಸ್‌-ರೇ ಬಳಸಿಕೊಂಡು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿರುವ ರೋಗಿಗಳನ್ನು ಗುರುತಿಸಲು ಸಹಾಯಕಾರಿಯಾಗಿದೆ.

ಕರ್ನಾಟಕದ, ಪುರುಷರು ಮತ್ತು ಮಹಿಳೆಯರಲ್ಲಿ ಕೂಡಾ ಕ್ಯಾನ್ಸರ್ ಪ್ರತಿ ವರ್ಷ ಸುಮಾರು 1% ರಷ್ಟು ಹೆಚ್ಚುತ್ತಲೆ ಇದೆ. ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ (ICMR) ನಡೆಸಿದ ಅಧ್ಯಯನದ ಪ್ರಕಾರ, 2025 ರ ವೇಳೆಗೆ ಕರ್ನಾಟಕದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುವ ವರದಿಗಳಿವೆ. ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಅಷ್ಟ್ರಾಜೆನಿಕಾ ಸಂಸ್ಥೆಯ ಸಂಜೀವ್ ಪಾಂಚಾಲ್ ಅವರು ಪರಸ್ಪರ ಒಡಂಬಡಿಕೆ ಹಸ್ತಾಂತರಿಸಿಕೊಂಡರು.

 

Leave A Reply

Your email address will not be published.