DK Shivakumar: ಡಿಕೆ ಶಿವಕುಮಾರ್’ಗೆ ಹೈಕೋರ್ಟಿನಿಂದ ಭಾರೀ ಶಾಕ್: ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್, ಕಾಂಗ್ರೆಸ್ ನಲ್ಲಿ ತಳಮಳ !

Political news Karnataka High Court refuses to quash FIR by CBI against D.K. Shivakumar

DK Shivakumar: ತನ್ನ ಡಿಕ್ಲೇರ್ಡ್ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ (Disproportionate Assets Case) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಂಕಷ್ಟ ಶಾಕ್ ನೀಡಿದೆ. ಡಿಕೆಶಿ ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ (High Court) ವಜಾಗೊಳಿಸಿದೆ. ಹಾಗಾಗಿ ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ಸಿಕ್ಕಿರೋದು ಕಾಂಗ್ರೆಸ್ ವಲಯದಲ್ಲಿ ತಲ್ಲಣ ಮೂಡಿಸಿದೆ.

ಡಿಸಿಎಂ ಡಿಕೆ ಶಿವಕುಮಾರ್ ರವರು ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು, ಬೆಳಿಗ್ಗೆ ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠವು ಈ ಕುರಿತು ತೀರ್ಪು ನೀಡಿದ್ದು, ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿದೆ. ಹಾಗಾಗಿ ಇಂದಿನಿಂದಲೇ ಸಿಬಿಐ ಡಿಕೆಶಿ ಅವರನ್ನು ವಿಚಾರಣೆ ನಡೆಸಬಹುದು ಎಂದು ಕೋರ್ಟ್ ತೀರ್ಪು ನೀಡಿದೆ.

ಹೆಚ್ಚುವರಿ ಆದಾಯ ಗಳಿಕೆಯ ವಿಷಯದಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯವು ಕರ್ನಾಟಕದ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು.2017ರಲ್ಲಿ ಸಲ್ಲಿಕೆ ಆಗಿದ್ದ ಈ ತನಿಖೆಯ ಮೇಲೆ ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಆಗಿನ ಬಿಜೆಪಿ ಸರ್ಕಾರ 2019ರ ಸೆ.3ರಂದು=ಅವರನ್ನು ಬಂಧಿಸಲಾಗಿತ್ತು. ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್‌ 3 ರಂದು ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇಡಲಾಗಿತ್ತು. ನಂತರ 50 ದಿನಗಳ ತರುವಾಯ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: ICC ವಿಶ್ವಕಪ್ ಕ್ರಿಕೆಟ್: ಭಾರತ ಸೋಲಿಸಿದ್ರೆ ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್ ಜತೆ ‘ತಿನ್ನಿಸುವ’ ವಿಚಿತ್ರ ಆಫರ್ ನೀಡಿದ ಪಾಕಿಸ್ತಾನಿ ಹುಡುಗಿ !

Leave A Reply

Your email address will not be published.