Mangaluru: ಹರೀಶ್ ಪೂಂಜಾ ಓರ್ವ ಬಚ್ಚಾ !

Mangaluru news CM Siddaramaiah called MLA Harish Poonja as Bacha

Mangaluru: ಸಿಎಂ ಸಿದ್ದರಾಮಯ್ಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು (Harish Poonja) ಬಚ್ಚಾ ಎಂದು ಕರೆದಿದ್ದಾರೆ. ಶಾಸಕ ಹರೀಶ್ ಪೂಂಜಾ ‘ಕಲೆಕ್ಷನ್ ಮಾಸ್ಟರ್’ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ನವರು ಮಂಗಳೂರು (Mangaluru) ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜತೆ ಮಾತಾಡಿ ಈ ಹೇಳಿಕೆ ನೀಡಿದ್ದಾರೆ.

ಈ ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು. ಇಲ್ಲಿಯ ತನಕ ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಕಲೆಕ್ಷನ್ ಮಾಸ್ಟರ್ ಎಂದು ತನ್ನ ಹಿಂದಿನ ಬಿಜೆಪಿ ಸರ್ಕಾರದ ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಅವರು ಕಿಡಿ ನುಡಿದಿದ್ದಾರೆ.

ಈ ಸಂದರ್ಭ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ’50 ಕೋಟಿ ಆಫರ್ ಬಗ್ಗೆ ನನಗೆ ಗೊತ್ತಿಲ್ಲ, ರವಿ ಹತ್ತಿರ ಕೇಳಿ. ಯಾರು ಹೇಳಿದ್ದಾರೋ ಅವರ ಹತ್ತಿರ ಕೇಳಿ. ಈ ಕೆಳಗಿನ ನನಗೆ ಯಾವುದೇ ಮಾಹಿತಿ ಇಲ್ಲ. ಬಿಜೆಪಿಯವರು ನಮ್ಮ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದ್ದಾರೆ ಅನ್ನೋ ಮಾಹಿತಿಯಿದೆ. ಆದ್ರೆ 50 ಕೋಟಿ ಕೊಟ್ಟು ಅಧಿಕಾರದ ಆಫರ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ” ಎಂದು ಅವರು ನುಡಿದಿದ್ದಾರೆ.

ಗೃಹ ಮಂತ್ರಿ ಜಿ. ಪರಮೇಶ್ವರ್ (G Parameshwar) ಮನೆಯಲ್ಲಿ ಡಿನ್ನರ್ ಪಾರ್ಟಿ ಕುರಿತಾಗಿ ಅವರು ಮಾತನಾಡಿ, ,’ಪರಮೇಶ್ವರ್ ಊಟಕ್ಕೆ ಕರೆದಿದ್ದರು, ಹೋಗಿದ್ದೇವೆ. ಅದಕ್ಕೆ ಮಸಾಲೆ ಯಾಕೆ ಹಾಕ್ತೀರಾ? ಅವರು ನನಗೆ, ಮಹಾದೇವಪ್ಪ, ಸತೀಶ್ ಜಾರಕಿಹೊಳಿಗೆ ಊಟಕ್ಕೆ ಕರೆದಿದ್ದರು. ಅಲ್ಲಿ ಯಾವುದೇ ರಾಜಕೀಯ ಇಲ್ಲ. ಅದೆಲ್ಲಾ ಸುಳ್ಳು. ಮಾಧ್ಯಮಗಳು ಬಣ್ಣ ಕಟ್ಟುತ್ತಿದ್ದಾರೆ ‘ ಎಂದರು.

ಈ ಸಂದರ್ಭದಲ್ಲಿ ನಿಗಮ ಮಂಡಳಿಗಳ ನೇಮಕಾತಿ ಕುರಿತು ಕೂಡ ಅವರು ಮಾತನಾಡಿದರು. ಮೊದಲ ಹಂತದಲ್ಲಿ ಕೆಲ ಶಾಸಕರಿಗೆ ನಿಗಮ ಮಂಡಳಿ ಕೊಡುತ್ತೇವೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಶೀಘ್ರವಾಗಿ ಹಂಚಿಕೆ ಮಾಡಲಾಗುತ್ತದೆ. ಬರ ಪರಿಹಾರ 7,900 ಕೋಟಿ ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಈ ತನಕ ಒಂದು ರೂಪಾಯಿ ಪರಿಹಾರ ಕೊಟ್ಟಿಲ್ಲ. ಬರದ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಹೊಂದಿದೆ ಎಂದರು. ಇನ್ನು ಕಾರ್ಕಳದ ಪರಶುರಾಮ ಮೂರ್ತಿ ಅಸಲಿನಾ? ನಕಲಿನಾ ಎಂಬುದರ ಕುರಿತು ಹೇಳಿಕೆ ನೀಡಿದ ಅವರು ಈ ಬಗ್ಗೆ ತನಿಖೆ ಆಗಲಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸೌಜನ್ಯಾ ಮರುತನಿಖೆ ನಾವು ಮಾಡಲು ಆಗಲ್ಲ, ಕೇಂದ್ರ ಮಾಡಬೇಕು ಎಂದು ಹೇಳಿದ್ದಾರೆ.

Leave A Reply

Your email address will not be published.