Dasara Elephant Arjuna: ದಸರಾ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಸಾವು!

Dasara Elephant Arjuna: ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ಸಂದರ್ಭ ಈ ದುರಂತ ಸಂಭವಿಸಿದೆ. ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ಕಾರ್ಯ ನಡೆಸಿದ್ದಾರೆ.

ಈ ಹಿಂದೆ ಹಲವು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಮೃತಪಟ್ಟಿದೆ.

ಸಾಕಾನೆಗಳು ಹಾಗೂ ಕಾಡಾನೆ ಮಧ್ಯೆ ಕಾಳಗ ನಡೆದಿದ್ದು, ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಇತರ ಸಾಕಾನೆಗಳು ಓಡಿ ಹೋಗಿದ್ದರೆ. ಅರ್ಜುನ ಮಾತ್ರ ಒಂಟಿಸಲಗದ ಜೊತೆ ಸೆಣಸಾಡಿತ್ತು.

ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ನಾಲ್ಕು ಸಾಕಾನೆಗಳೊಂದಿಗೆ ಈ ಕಾರ್ಯಾಚರಣೆ ಮಾಡಲು ಬಂದಿದ್ದು, ಕಾಡಾನೆಗೆ ಅರಿವಳಿಕೆ ಮದ್ದು ನೀಡುವ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದ್ದು, ಉಳಿದ ಮೂರು ಸಾಕಾನೆ ಓಡಿ ಹೋಗಿದ್ದು, ಅರ್ಜುನ ಮಾತ್ರ ಕಾಳಗಕ್ಕೆ ನಿಂತಿದ್ದ.

ಎರಡು ಆನೆಗಳು ಕಾದಟ ಮಾಡಲು ಶುರು ಮಾಡುತ್ತಿದ್ದಂತೆ ಅರ್ಜುನನ ಮಾವುತ ಮೇಲಿಂದ ಇಳಿದು ಓಡಿದ್ದಾರೆ ಎಂದು ವರದಿಯಾಗಿದೆ.

Leave A Reply

Your email address will not be published.