Self Harm: ಪ್ರೀತಿಸಿ ಮದುವೆಯಾದ ಯುವತಿ, ಮದುವೆಯಾದ 6 ತಿಂಗಳಿಗೇ ಆತ್ಮಹತ್ಯೆ; ಕಾರಣ ಇಲ್ಲಿದೆ!

Chikkaballapura crime news woman commits suicide after 6 months of love marriage

Chikkaballapura news: ಆರು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿಯೋರ್ವಳು ತನ್ನ ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ ಘಟನೆಯೊಂದು ನಡೆದಿದೆ. ಮುಸ್ಕಾತ್‌ ತಾಜ್‌ (21) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಪತಿ ಹಾಗೂ ಪತ್ನಿ ಮಧ್ಯೆ ವೈಮನಸ್ಸು ಉಂಟಾಗಿದ್ದು, ಇದರಿಂದ ನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿ ಕೋಟೆಯಲ್ಲಿರುವ ಪತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿದ್ದಾರೆ.

ಇವರಿಬ್ಬರು ಪ್ರೀತಿಸಿ ಮದುವೆಯಾಗಿದ್ದು, ಇದೀಗ ಪತಿ ಅಜಾಮ್‌ ವಿರುದ್ಧ ಪತ್ನಿಯ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಈ ಕುರಿತು ಚಿಂತಾಮಣಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Pejavara Shree Udupi: ಮುಸ್ಲಿಂ ಪರ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ; ಪೇಜಾವರಶ್ರೀ ನೀಡಿದ್ರು ಬಿಗ್‌ ಅಪ್ಡೇಟ್‌!

Leave A Reply

Your email address will not be published.