Crime News: ಅಡಿಕೆಮರ ಬಿದ್ದು ಸಾವನ್ನಪ್ಪಿದ ಮಹಿಳೆ !

death news crime news woman died after a Arecanut tree fell on her

ತೋಟವೊಂದರಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಡಿಕೆ ಮರ ಮುರಿದಿದ್ದು, ದುರಾದೃಷ್ಟವಶಾತ್ ಅದು ಆಕೆಯ ತಲೆಯ ಮೇಲೆ ಬಿದ್ದು ದಾರುಣ ಸಾವನ್ನಪ್ಪಿದ್ದಾರೆ.

ವಿಟ್ಲದ ಸಾಲೆತ್ತೂರು ನಿವಾಸಿಯಾಗಿರುವ ಗುಲಾಬಿ (48) ಎಂಬವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಮುರಿದು ಬಿದ್ದ ಅಡಿಕೆ ಮರ ನೇರವಾಗಿ ಮಹಿಳೆಯ ನೆತ್ತಿಯ ಮೇಲೆ ಬಿದ್ದಿದೆ. ಇದರಿಂದ ತಲೆಗೆ ಗಂಭೀರ ಏಟಾಗಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಮೊದಲು ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Leave A Reply

Your email address will not be published.