M M kalburgi and Gauri lankesh murder case: ಸಂಶೋಧಕ ಎಂ.ಎಂ.ಕಲ್ಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್‌ ಪ್ರಕರಣ; ವಿಚಾರಣೆಗೆ ವಿಶೇಷ ಕೋರ್ಟ್‌!

Karnataka news special court for Dr M M kalburgi and Gauri lankesh murder case

M M kalburgi and Gauri lankesh murder case: ಸಂಶೋಧಕ ಎಂ.ಎಂ.ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹತ್ಯಾ ಪ್ರಕರಣಗಳ( M M kalburgi and Gauri lankesh murder case) ತ್ವರಿತ ವಿಚಾರಣೆಗೆ ರಾಜ್ಯದಲ್ಲಿ ವಿಶೇಷ ಕೋರ್ಟ್‌ ಸ್ಥಾಪನೆಗೆ ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿಕಾರಿಗಳಲ್ಲಿ ಚರ್ಚೆ ಮಾಡಿ ಆದೇಶ ಹೊರಡಿಸಿದ್ದಾರೆ.

ಡಾ. ಎಂ.ಎಂ. ಕಲಬುರ್ಗಿ, ಹಿರಿಯ ಸಾಹಿತಿ ಹಾಗೂ ಕನ್ನಡ ಸಂಶೋಧನಾ ಕ್ಷೇತ್ರದ ದಿಗ್ಗಜರು ದಿನಾಂಕ: 31.08.2015 ರಂದು ಧಾರವಾಡದ ಅವರ ಸ್ವಗ್ರಹದಲ್ಲಿ, ಹತ್ಯೆಯಾಗಿ ಏಳು ವರ್ಷಗಳು ಪೂರ್ಣಗೊಂಡಿವೆ. ಪ್ರಕರಣದ ಸಂಬಂಧ 2018-19ರಲ್ಲಿ ನ್ಯಾಯಾಲಯಕ್ಕೆ, ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ. ಈಗಾಗಲೇ ಸಾಕಷ್ಟು ಸಮಯ ಆಗಿರುವುದರಿಂದ ವಿಶೇಷ ನ್ಯಾಯಾಲಯ ರಚಿಸುವಂತೆ ಮೃತದ ಪತ್ನಿ ಶ್ರೀಮತಿ ಉಮಾದೇವಿ ಎಂ. ಕಲಬುರ್ಗಿ ರವರು ಕೋರಿಯ್ಯ, ಈ ಬಗ್ಗೆ ಜರೂರು ಅಗತ್ಯ ಕ್ರಮವಹಿಸಲು ಸೂಚಿಸಿದೆ.

ಇದನ್ನೂ ಓದಿ:  ನೀಲಗಿರಿ ಮರಕ್ಕಾಗಿ ಜಗಳ, ವ್ಯಕ್ತಿಯೊಬ್ಬನಿಗೆ ಗುಂಡು ಹಾರಿಸಿ ಸಾಯಿಸಿದ ಕಿರುತೆರೆ ನಟ!

Leave A Reply

Your email address will not be published.