Sabarimala Temple: ದರ್ಶನಕ್ಕೆಂದು ಸರದಿ ಸಾಲಿನಲ್ಲಿ ನಿಂತಿದ್ದ 11 ವರ್ಷದ ಬಾಲಕಿ ಕುಸಿದು ಬಿದ್ದು ಸಾವು!

Sabarimala temple girl dies at sabarimala crowd dramatic change in darshan time

Sabarimala Temple: ಶನಿವಾರ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ (Sabarimala Temple)ಭೇಟಿ ನೀಡಿದ ತಮಿಳುನಾಡಿನ 12 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಪದ್ಮಶ್ರೀ ಎಂಬ ಬಾಲಕಿ ಬೆಟ್ಟದ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿರುವ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ.

ಪೊಲೀಸರ ಪ್ರಕಾರ, ಬಾಲಕಿ ತನ್ನ ಕುಟುಂಬದವರೊಂದಿಗೆ ಇದ್ದಿದ್ದು, ಉಸಿರಾಟದ ಸಮಸ್ಯೆ ಸೇರಿ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಅಪ್ಪಾಚಿಮೇಡುವಿನ ಹೃದ್ರೋಗ ಚಿಕಿತ್ಸಾ ಕೇಂದ್ರದಲ್ಲಿ ಬಾಲಕಿ ನಿಧನರಾಗಿರುವುದಾಗಿ ಎಂದು ಹೇಳಿದ್ದಾರೆ.

ಶಬರಿಮಲೆ ದೇವಸ್ಥಾನಕ್ಕೆ ಭಕ್ತಾಧಿಗಳ ದಂಡು ಹರಿದು ಬರುತ್ತಿದೆ. ಯಾತ್ರಾರ್ಥಿಗಳು 18 ಗಂಟೆಗಳವರೆಗೆ ದರ್ಶನಕ್ಕಾಗಿ ಕಾಯುತ್ತಿದ್ದರು. ಅನೇಕರು ತಮ್ಮ ಸರತಿ ವ್ಯವಸ್ಥೆಯನ್ನು ಉಲ್ಲಂಘಿಸಿದರ ಪರಿಣಾಮ ಅವ್ಯವಸ್ಥೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Bloomberg List: ಇವು ವಿಶ್ವದ ಅತ್ಯಂತ ಶ್ರೀಮಂತ ಕುಟುಂಬಗಳು! ಇವರ ಸಂಪತ್ತು ಕೇಳಿದರೆ ನೀವು ಶಾಕ್‌ ಆಗುವುದು ಖಂಡಿತ!

Leave A Reply

Your email address will not be published.