Udupi: ಖ್ಯಾತ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು!

Udupi: ಖ್ಯಾತ ಸಮಾಜ ಸೇವಕ ಲೀಲಣ್ಣ ಎಂದೇ ಪರಿಚಿತರಾಗಿದ್ದ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಅವರು ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಗಳವಾರ ತಮ್ಮ ಮನೆಯಲ್ಲಿ ರಾತ್ರಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಲೀಲಾಧರ ಶೆಟ್ಟಿ ಅವರು ಕಾಪು ರಂಗತರಂಗ ತಂಡದ ಯಜಮಾನ ಆಗಿ ಭಾರೀ ಜನಪ್ರಿಯತೆ ಪಡೆದಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರ ಅತ್ಯಂತ ಆಪ್ತರಾಗಿದ್ದ ಇವರು ಜನರ ಪರವಾಗಿ ಕೆಲಸ ಕೂಡಾ ಮಾಡಿದ್ದರು.

ದಂಪತಿ ಸಹಿತ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣವೇನೆಂದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಕುರಿತು ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: Mangaluru: ಮಂಗಳಾ ಸ್ಟೇಡಿಯಂ ಈಜುಕೊಳದಲ್ಲಿ ಯುವಕನೋರ್ವ ನೀರಲ್ಲಿ ಮುಳುಗಿ ಸಾವು!

Leave A Reply

Your email address will not be published.