Bengaluru: ಕೆರೆ ಏರಿ ಮೇಲಿಂದ ಕೆಳಗುರುಳಿದ ಬಸ್! ಹಲವರಿಗೆ ಗಂಭೀರ ಗಾಯ

bus accident news private bus has overturned near Anekal Bangalore

ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್ಸೊಂದು ಕೆರೆ ಏರಿ ಮೇಲಿಂದ ಕೆಳಗೆ ಉರುಳಿ ಬಿದ್ದ ಘಟನೆಯೊಂದು ನಡೆದಿದೆ. ಈ ಘಟನೆಯು ಬೆಂಗಳೂರು ಹೊರವಲಯ ಆನೇಕಲ್‍ನಲ್ಲಿ ನಡೆದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಚಿಕ್ಕ ಬೆಳಂಡೂರಿನಿಂದ ಓಂ ಶಕ್ತಿಗೆ ಖಾಸಗಿ ಬಸ್ಸಂದು ಪ್ರಯಾಣ ಬೆಳೆಸಿತ್ತು. ಈ ಬಸ್ಸಿನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು. ಅನೇಕಲ್ ಬಳಿ ಕೆರೆ ಏರಿ ಮೇಲೆ ಬರುತ್ತಿದ್ದ ಸಂದರ್ಭದಲ್ಲಿ ಬಸ್ ನಿಯಂತ್ರಣ ತಪ್ಪಿ ಕೆಳಗೆ ಉರುಳಿ ಬಿದ್ದಿದೆ. ತಕ್ಷಣ ಸ್ಥಳೀಯರ ಸಹಾಯದಿಂದ ಬಸ್ಸಿನಲ್ಲಿದ್ದ ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಇಂದು ಬೆಳಿಗ್ಗೆ ಸುಮಾರು 5:30ರ ಹೊತ್ತಿಗೆ ಆನೇಕಲ್ ತಾಲೂಕಿನ ಸರ್ಜಾಪುರ – ಅತ್ತಿಬೆಲೆ ಮುಖ್ಯ ರಸ್ತೆಯ ಬಿದರಗುಪ್ಪೆ ಕೆರೆ ಏರಿಯ ಮೇಲೆ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹಾಗೂ ಈರ್ವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

ಕೆರೆ ಏರಿಯ ಮೇಲಿನ ಬಲ ಭಾಗದಲ್ಲಿ ಸಂಪೂರ್ಣ ನೀರು ತುಂಬಿದ್ದ ಕೆರೆ ಇತ್ತು. ಅದೃಷ್ಟವಶಾತ್ ಬಸ್ ಎಡಗಡೆಗೆ ಬಿದ್ದಿದ್ದರಿಂದ ಬಾರಿ ಅನಾಹುತವೊಂದು ತಪ್ಪಿ ಹೋಗಿದೆ. ಈ ಘಟನೆಯು ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.