Ayodhya updates: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ! 8 ನೂತನ ರೈಲುಗಳಿಗೆ ಚಾಲನೆ ನೀಡಿದ ಪಿಎಂ!

ಇಂದು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಆ ಬಳಿಕ 15 ಸಾವಿರ ಕೋಟಿ ರೂಪಾಯಿಗಳ ಯೋಜನೆಗಳಿಗೆ ಚಾಲನೆ ನೀಡುವ ಭಾಗವಾಗಿ ಮೋದಿ ಒಟ್ಟು ಎಂಟು ರೈಲುಗಳಿಗೆ ಚಾಲನೆ ನೀಡಿದ್ದಾರೆ.

2024ರ ಜನವರಿ 22ರಂದು ಲೋಕಾರ್ಪಣೆ ಮಾಡಲಾಗುತ್ತಿರುವ ಅಯೋಧ್ಯೆಯ ರಾಮಮಂದಿರಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಈಗಾಗಲೇ ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು, ಸಕಲ ತಯಾರಿಗಳು ವೇಗದಿಂದ ಸಾಗುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಅಯೋಧ್ಯೆಗೆ ಸಾಗಿಬರಲಿರುವ ಭಕ್ತಾದಿಗಳಿಗೆ ಸಾರಿಗೆ ವ್ಯವಸ್ಥೆಯು ಸುಗಮವಾಗಿಸಲು ಸರ್ಕಾರ ನೂತನ ರೈಲುಗಳಿಗೆ ಚಾಲನೆ ನೀಡಿದೆ.

ಡಿಸೆಂಬರ್ 30ರ ಶನಿವಾರದಂದು ಅಯೋಧ್ಯೆಗೆ ಭೇಟಿ ನೀಡಿದ ಪಿಎಂ, ಏಕಕಾಲದಲ್ಲಿ 6 ಒಂದೇ ಭಾರತ್ ಹಾಗೂ 2 ಅಮೃತ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಉಪಸ್ಥಿತರಿದ್ದರು.

Leave A Reply

Your email address will not be published.