Mangaluru: ಕ್ರಿಶ್ಚಿಯನ್‌ ಸ್ಕೂಲ್‌ನಲ್ಲಿ ಹಿಂದೂಗಳ ಅವಹೇಳನ ಪ್ರಕರಣ; ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ FIR

Mangaluru: ಮಂಗಳೂರಿನ ಜೆರಡೋಸಾ ಶಾಲೆಯಲ್ಲಿ ಹಿಂದೂ ಅವಹೇಳನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್‌ ಶೆಟ್ಟಿ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲೆಯ ಮುಂದೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರೆಂದು ಈ ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಅಕ್ರಮವಾಗಿ ಜೈ ಶ್ರೀರಾಮ್‌ ಎಂಬ ಘೋಷಣೆಯನ್ನು ಗುಂಪುಗೂಡಿ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಇದನ್ನೂ ಓದಿ: Astro Tips: ಇಂದು ಈ ರಾಶಿಯವರ ದಿನ ಸೂಪರ್ ಆಗಿರುತ್ತೆ, ಅಂದುಕೊಂಡಿದ್ದು ನಿಜ ಆಗೋ ಡೇ!

ಅನಿಲ್‌ ಜೆರಾಲ್ಡ್‌ ಲೋಬೋ ಎಂಬುವವರು ನೀಡಿದ ದೂರಿನ ಮೇರೆ ವಿಎಚ್‌ಪಿ ಮುಖಂಡ ಶರಣ್‌ ಪಂಪ್‌ವೆಲ್‌, ಪಾಲಿಕೆ ಸದಸ್ಯ ಸಂದೀಪ್‌ ಗರೋಡಿ, ಭರತ್‌ ಕುಮಾರ್‌ ಸೇರಿ ಹಲವರ ವಿರುದ್ಧ FIR ದಾಖಲಾಗಿದೆ. ಹಿಂದೂ ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಪ್ರಚೋದನೆ ನೀಡಿದ್ದಕ್ಕಾಗಿ ಆರೋಪಿಸಿ ದೂರು ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಶಾಂತಿ, ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿರುವುದಾಗಿ ಪಾಂಡೇಶ್ವರ ಠಾಣೆ ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಿದ್ದಾರೆ.

A1 ಬಿಜೆಪಿ ಶಾಸಕ ವೇದವ್ಯಾಸ ಕಾಮತ್, A2 ಬಿಜೆಪಿ ಶಾಸಕ ಭರತ್ ಶೆಟ್ಟಿ, A3 ಶರಣ್ ಪಂಪ್ವೆಲ್, A4 ಸಂದೀಪ್ ಗರೋಡಿ, A5 ಭರತ್ ಕುಮಾರ್ ಎಂದು ಈ ಪ್ರಕರಣದಲ್ಲಿ ಹೆಸರು ಉಲ್ಲೇಖಿಸಲಾಗಿದೆ.

Leave A Reply

Your email address will not be published.