Uppinangady: ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

Uppinangady: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Vastu Tips: ಯಾವುದೇ ಕಾರಣಕ್ಕೂ ಈ ದಿಕ್ಕಿನಲ್ಲಿ ಕನ್ನಡಿ ಇಡಬೇಡಿ, ದೋಷ ಕಾದಿರುತ್ತೆ!

ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ನಿವಾಸಿ ಅತ್ತಾವುಲ್ಲಾ (22) ಮೃತ ಯುವಕ. ಮಡಂತ್ಯಾರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರೆನ್ನಲಾಗಿದೆ.

ಅತ್ತಾವುಲ್ಲಾ ಒಂದೂವರೆ ತಿಂಗಳಿಂದ ಕಾಲೇಜಿಗೆ ಹೋಗದೇ ಮನೆಯಲ್ಲಿದ್ದು, ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆ.14ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸು ಬಂದು ನೋಡಿದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅತ್ತಾವುಲ್ಲಾ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ, ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆತನ ಸಾವಿನಲ್ಲಿ ಯಾವುದೇ ಸಂಶಯವಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.