Mangaluru: ಮಂಗಳೂರಿನಲ್ಲಿ ಕಾಂಗ್ರೆಸ್‌ ಬೃಹತ್‌ ಸಮಾವೇಶ; ಲೋಕಸಭೆ ಚುನಾವಣೆ ಭರದ ಸಿದ್ಧತೆ; ಟ್ರಾಫಿಕ್‌ ಬದಲಾವಣೆ, ಪಾರ್ಕಿಂಗ್‌ ವಿವರ ಇಲ್ಲಿದೆ

Mangaluru: ಇಂದು ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ನಡೆಯಲಿದ್ದು, ಮಂಗಳೂರಿನ ಅಡ್ಯಾರ್‌ನಲ್ಲಿರುವ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸಮಾವೇಶ ಆಯೋಜಿಸಲಾಗಿದೆ.

ಲೋಕಸಭೆ ಚುನಾವಣೆ ಇನ್ನೇನು ಬರಲಿರುವುದರಿಂದ ಚುನಾವಣೆಗೆ ಕಾಂಗ್ರೆಸ್‌ನ ಎಲ್ಲಾ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಎಐಸಿಸಿ ಸೂಚನೆ ನೀಡಿದ್ದರಿಂದ ರಾಜ್ಯಮಟ್ಟದಲ್ಲಿ ಬೃಹತ್‌ ಸಮಾವೇಶ ನಡೆಯಲಿದ.

ಇದನ್ನೂ ಓದಿ: Vastu Tips: ಮನೆಯ ಈ ದಿಕ್ಕಿನಲ್ಲಿ ಯಾವುದೇ ಕಾರಣಕ್ಕೂ ಪೊರಕೆಯನ್ನು ಇಡಬೇಡಿ, ಬಡವರಾಗ್ತೀರ!

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಧುರೀಣರುಗಳಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಫೆ.17 (ಇಂದು) ರ ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಕಾರ್ಯಕ್ರಮ ಮುಗಿಯುವವರೆಗೆ ಟ್ರಾಫಿಕ್‌ ಬದಲಾವಣೆ ಮಾಡಲಾಗಿದೆ. ಉಡುಪಿ ಕಡೆಯಿಂದ ಬೆಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ನಂತೂರು-ಪಂಪ್‌ವೆಲ್‌-ತೊಕ್ಕೊಟ್ಟು-ಮುಡಿಪು-ಮೆಲ್ಕಾರ್‌ ಮೂಲಕ ಸಂಚರಿಸಲಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು-ಪಂಪ್‌ವೆಲ್‌ ಮೂಲಕ ಸಂಚರಿಸಲು ಸೂಚಿಸಲಾಗಿದೆ.

ಕಾಮತ್‌ ಮೈದಾನದಲ್ಲಿ ಪಾರ್ಕಿಂಗ್‌ ವ್ಯವಸ್ಥೆಯನ್ನು ಮಾಡಲಾಗಿದ್ದು, ಇಲ್ಲಿ ಬಂಟ್ವಾಳದಿಂದ ಬರುವ ಗಣ್ಯರ ಕಾರುಗಳು, ಸಾರ್ವಜನಿಕರ ಮೋಟಾರು ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಬಂಟ್ವಾಳದಿಂದ ಬರುವ ಸಾರ್ವಜನಿಕರ ಕಾರುಗಳನ್ನು ಅಡ್ಯಾರ್‌ನ ಕರ್ಮಾರ್‌ ಮೈದಾನದಲ್ಲಿ ಪಾರ್ಕಿಂಗ್‌, ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಕಾರ್ಯಕರ್ತರನ್ನು ಕಾಮತ್‌ ಪಾರ್ಕಿಂಗ್‌ ಬಳಿ ಇಳಿಸಿ ಮೋತಿಶ್ಯಾಮ್‌/ಷಾ ಮೈದಾನದಲ್ಲಿ ಪಾರ್ಕಿಂಗ್‌

ಮಂಗಳೂರು ಕಡೆಯಿಂದ ಬರುವ ಗಣ್ಯರ ಕಾರುಗಳನ್ನು ಅಡ್ಯಾರ್‌ ಗಾರ್ಡನ್ನಲ್ಲಿ ಪಾರ್ಕಿಂಗ್‌

ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಷಾ ಮೈದಾನದಲ್ಲಿ ಪಾರ್ಕಿಂಗ್‌

ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಮೋಟಾರ್‌ ಸೈಕಲ್‌ಗಳನ್ನು ಅಡ್ಯಾರ್‌ ಗಾರ್ಡನ್‌ ಮೈದಾನದಲ್ಲಿ ಪಾರ್ಕಿಂಗ್‌

ಅಡ್ಯಾರ್‌ ಕಟ್ಟೆಯಲ್ಲಿರುವ ಜಯಶೀಲರವರ ಮೈದಾನದಲ್ಲಿ ಪಾರ್ಕಿಂಗ್‌ ವ್ಯವಸ್ಥೆಯನ್ನು ಕೂಡಾ ಮಾಡಲಾಗಿದೆ ಎಂದು ವರದಿಯಾಗಿದೆ.

Leave A Reply

Your email address will not be published.