Mangaluru; ಚಾಲಕನ ನಿಯಂತ್ರಣ ತಪ್ಪಿದ ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ, ಒಬ್ಬರಿಗೆ ಗಾಯ

Mangaluru: ಅತೀ ವೇಗದಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇನ್ನೊಂದು ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆಯೊಂದು ಕೊಡಿಯಾಲ್‌ ಬೈಲ್‌ ನವಭಾರತ ವೃತ್ತದ ಬಳಿ ಸಂಭವಿಸಿದೆ.

ಈ ಘಟನೆಯಲ್ಲಿ ವ್ಯಕ್ತಿಯೊಬ್ಬರಿಗೆ ಗಾಯವಾಗಿದೆ. ಹಾಗೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಘಟನೆಯಲ್ಲಿ ಮೂರು ದ್ವಿಚಕ್ರ ವಾಹನಗಳು, ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಇನ್ನೊಂದು ಕಾರು ಜಖಂಗೊಂಡಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಕಾರನ್ನು ಚಲಾಯಿಸುತ್ತಿರುವುದಾಗಿ ವರದಿಯಾಗಿದ್ದು, ಬ್ರೇಕ್‌ ಬದಲು ಆಕ್ಸಿಲೇಟರ್‌ ಅದುಮಿರುವ ಸಾಧ್ಯತೆಯಿದೆ ಎನ್ನಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Leave A Reply

Your email address will not be published.