Exam Phobia: ಪರೀಕ್ಷೆ ಹಾಲ್‌ನಿಂದಲೇ ಹೊರಗೆ ಬಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Udupi: ಪರೀಕ್ಷೆಯ ಭಯದಿಂದ ನಡುಗುತ್ತಿದ್ದ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಮಣಿಪಾಲದಲ್ಲಿ ನಡೆದಿದೆ. ಮಣಿಪಾಲ ಮಾಹೆ (MAHE in Manipal) ವಿವಿಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿರುವ ಬಿಹಾರ ಮೂಲದ ಸತ್ಯಂ ಸುಮನ್‌ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಇದನ್ನೂ ಓದಿ: Coriander: ಕೊತ್ತಂಬರಿ ಸೊಪ್ಪನ್ನು ಫ್ರಿಡ್ಜ್‌ ಇಲ್ಲದೆ ವಾರಗಟ್ಟಲೆ ತಾಜಾವಾಗಿರಿಸುವುದು ಹೇಗೆ? ಈ 3 ಸಲಹೆಗಳು ನಿಮಗೆ ಉಪಯುಕ್ತ

ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲಿ ಕಟ್ಟಡದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡ ಆತ ಹೊರಗೆ ಬಂದಿದ್ದು, ನಂತರ ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆ ಉಳಿದ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಕುರಿತು ಮಣಿಪಾಲ ಪ್ರಕರಣ ದಾಖಲಾಗಿದೆ.

Leave A Reply

Your email address will not be published.