Kadaba: ಬೈಕ್‌- ಬಸ್‌ ನಡುವೆ ಅಪಘಾತ; ದ್ವಿಚಕ್ರ ಸವಾರ ಸಾವು

Kadaba: ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರನೋರ್ವ ಮೃತ ಪಟ್ಟ ಘಟನೆಯೊಂದು ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ.

ವಾಸುದೇವ ಗೌಡ ಎಂಬುವವರೇ ಮೃತ ವ್ಯಕ್ತಿ. ಇವರು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ. ನೆಟ್ಟಣದಲ್ಲಿ ಮೆಕ್ಯಾನಿಕ್‌ ವೃತ್ತಿ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ.

ಕೆಎಸ್ಸಾರ್ಟಿಸಿ ಬಸ್‌ ನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆದಿರುವ ಪರಿಣಾಮ, ಗಂಭೀರವಾಗಿ ಗಾಯಗೊಂಡ ವಾಸುದೇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದಾರೆ, ಹಾಗೂ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Leave A Reply

Your email address will not be published.