Mangaluru: ಪ್ರತಿಭಟನೆ ಪ್ರಕರಣ; ವೇದವ್ಯಾಸ ಕಾಮತ್‌, ಭರತ್‌ ಶೆಟ್ಟಿಗೆ ನಿರೀಕ್ಷಣಾ ಜಾಮೀನು

Mangaluru: ಮಂಗಳೂರಿನ ಜೆರೋಸಾ ಶಾಲೆ ಮುಂಭಾಗ ನಡೆದ ಪ್ರತಿಭಟನೆ ಪ್ರಕರಣಕ್ಕೆ ಕುರಿತಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್‌ ಶೆಟ್ಟಿ ಹಾಗೂ ಇತರರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಇದನ್ನೂ ಓದಿ: Karnatka BJP: ರಾಜ್ಯ ಬಿಜೆಪಿಯ ಇಬ್ಬರು ಶಾಸಕರು ಕಾಂಗ್ರೆಸ್‌ಗೆ ಸೇರಲು ಡೇಟ್‌ ಫಿಕ್ಸ್‌

ಮಂಗಳೂರಿನಲ್ಲಿ ಶಾಸಕರ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು. ಜೆರಾಲ್ಡ್‌ ಲೋಬೋ ನೀಡಿದ ದೂರಿನಂತೆ ಈ ದೂರು ದಾಖಲಾಗಿತ್ತು. ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ವಿಶ್ವ ಹಿಂದು ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌ ಕಾರ್ಪೋರೇಟರ್‌ಗಳಾದ ಸಂದೀಪ್‌ ಹಾಗೂ ಭರತ್‌ ಕುಮಾರ್‌ ವಿರುದ್ಧ ಕೂಡಾ ಪ್ರಕರಣ ದಾಖಲಾಗಿತ್ತು. ಇವರಿಗೂ ಕೂಡಾ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

Leave A Reply

Your email address will not be published.