Bantwala: ಕೃಷಿಭೂಮಿಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ; ಪ್ರಕರಣ ದಾಖಲು

Bantwala: ಜಮೀನಿನಲ್ಲಿ ಕೆಲಸದವರೊಂದಿಗೆ ಕೃಷಿ ಕೆಲಸದಲ್ಲಿ ನಿರತರಾಗಿದ್ದವರ ಮೇಲೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿದ ಘಟನೆಯೊಂದು ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Health Care: ಈ ಒಂದು ಎಲೆಯಿಂದ ಇದೆ ನೂರಾರು ಪ್ರಯೋಜನಗಳು, ಹೆಲ್ದಿಗಾಗಿ ಇದನ್ನು ತಿನ್ನಿ

ಫೆ.15 ರಂದು ಮಂಜುನಾಥ ಟಿ.ಸಿ. ಎಂಬುವವರು ಸರಪಾಡಿ ಗ್ರಾಮದಲ್ಲಿರುವ ತಮ್ಮ ಜಮೀನಿನಲ್ಲಿ ಕೆಲಸಗಾರರ ಜೊತೆ ಕೃಷಿ ಕೆಲಸದಲ್ಲಿ ನಿರತರಾಗಿದ್ದ ಸಮಯದಲ್ಲಿ ನಾಲ್ವರು ಆರೋಪಿಗಳು ಏಕಾಏಕಿ ಅವರ ಜಾಗಕ್ಕೆ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಹಾಗೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಆರೋಪಿಗಳ ಪೈಕಿ ಗಿರೀಶ್‌ ತಂದಿದ್ದ ಕತ್ತಿಯನ್ನು ತೋರಿಸಿ ಅವಾಚ್ಯ ಶಬ್ದಗಳಿಂದ ಬೈದಿದ್ದು, ಉಳಿದ ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಣಿನಾಲ್ಕೂರು ಗ್ರಾಮ ನಿವಾಸಿ ಮಂಜುನಾಥ ಟಿ.ಸಿ.ಎಂಬುವವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Leave A Reply

Your email address will not be published.