Karnatka BJP: ರಾಜ್ಯ ಬಿಜೆಪಿಯ ಇಬ್ಬರು ಶಾಸಕರು ಕಾಂಗ್ರೆಸ್‌ಗೆ ಸೇರಲು ಡೇಟ್‌ ಫಿಕ್ಸ್‌

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದ್ದು, ಜೊತೆಗೆ ಸರಕಾರ ನೀಡಿದ ಗ್ಯಾರಂಟಿ ಯೋಜನೆಯ ಬಳಿಕ ಇಬ್ಬರು ಪ್ರಮುಖ ಶಾಸಕರು ಕಾಂಗ್ರೆಸ್‌ಗೆ ವಾಪಸ್‌ ಮರಳಲು ಪ್ಲಾನ್‌ ಮಾಡಿರುವುದಾಗಿ ವರದಿಯಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರಿಗೆ ಈ ಕುರಿತು ಮಾಹಿತಿ ದೊರಕಿದ್ದು, ವಿಜಯೇಂದ್ರ ಅವರ ಮಾತಿಗೆ ಒಪ್ಪದೆ ಕಾಂಗ್ರೆಸ್‌ಗೆ ತೆರಳಲು ಸಜ್ಜಾಗಿ ನಿಂತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Rituraj Singh death: ಹೃದಯಾಘಾತದಿಂದ ಕಿರುತೆರೆ ನಟ ರಿತುರಾಜ್‌ ಸಿಂಗ್‌ ನಿಧನ

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್‌ ಹೆಬ್ಬಾರ್‌, ಮತ್ತು ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ದಿನಾಂಕ ನಿಗದಿ ಮಾಡಿದ್ದಾರೆ ಎಂದು ವರದಿಯಾಗಿದೆ. ಆಪ್ತರ ಜೊತೆ ಸಮಾಲೋಚನೆ ಮಾಡಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕೂಡಲೇ ಇಬ್ಬರೂ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಹಾಗೆನೇ ಕಾಂಗ್ರೆಸ್‌ ಪಕ್ಷ ಕೂಡಾ ನೀವು ಪಕ್ಷ ಸೇರುವುದಾದರೆ ಲೋಕಸಭೆ ಚುನಾವಣೆಗೆ ಮೊದಲೇ ಸೇರಬೇಕು ಎಂಬ ಒತ್ತಡ ಇದೆ ಎಂದು ವರದಿಯಾಗಿದೆ.

ಇಬ್ಬರು ಶಾಸಕರ ಜೊತೆ ಹೈಕಮಾಂಡ್‌ ಮಾತನಾಡಿ ಮನವೊಲಿಸಬೇಕು ಎಂದು ವಿಜಯೇಂದ್ರ ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.

Leave A Reply

Your email address will not be published.