Job Alert: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕನ್ಸಲ್ಟೆಂಟ್ (ಕಂಪನಿ ಸೆಕ್ರೆಟರಿ) ಹುದ್ದೆ ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಏಪ್ರಿಲ್ 24, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ವಿದ್ಯಾರ್ಹತೆ:

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ವಾಲಿಫೈಡ್ ಕಂಪನಿ ಸೆಕ್ರೆಟರಿ (ACS) ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 31, 2024ಕ್ಕೆ ಗರಿಷ್ಠ 62 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಮಾಸಿಕ ₹ 1,20,000

ಉದ್ಯೋಗದ ಸ್ಥಳ:

ಬೆಂಗಳೂರು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ಜನರಲ್ ಮ್ಯಾನೇಜರ್ (HR)

ಕಿಯೋಸ್ಕ್ ಲಿಮಿಟೆಡ್

2 ನೇ ಬ್ಲಾಕ್

ಕೋರಮಂಗಲ

ಬೆಂಗಳೂರು-560034

ಕರ್ನಾಟಕ

Leave A Reply

Your email address will not be published.