Cyber Crime: ಸೈಬರ್ ಕಳ್ಳರಿಂದ ಡಿವೈಎಸ್‌ಪಿ ಬ್ಯಾಂಕ್‌ ಖಾತೆಗೆ ಕನ್ನ! ಲಕ್ಷ ಲಕ್ಷ ಹಣ ಟ್ರಾನ್ಸ್ಫರ್!

Cyber Crime: ಸೈಬ‌ರ್ ಕಳ್ಳರು ಹಾಸನ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ಪಿ.ಕೆ.ಮುರಳೀಧ‌ರ್ ಎಂಬವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ (Cyber Crime) ಹಾಸನದಲ್ಲಿ ನಡೆದಿದೆ. ಹೌದು, ಡಿವೈಎಸ್‌ಪಿ ಅವರ ಖಾತೆಯಿಂದಲೇ 15,98,761 ಲಕ್ಷ ಹಣವನ್ನು ವರ್ಗಾವಣೆ ಮಾಡಿಕೊಂಡು ಸೈಬ‌ರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್‌ ಪೊಲೀಸ್‌ ಠಾಣೆಗೆ ಮುರಳೀಧ‌ರ್ ಅವರು ದೂರು ನೀಡಿದ್ದಾರೆ.

ಇದನ್ನೂ ಓದಿ: Murder: ಪ್ರಭುದ್ಧ್ಯಾ ಅನುಮಾನಸ್ಪದ ಸಾವು! ತಾಯಿಯಿಂದ ದೂರು ದಾಖಲು!

ಡಿವೈಎಸ್‌ಪಿ ಪಿ.ಕೆ.ಮುರಳೀಧರ್ ಅವರು ಮಡಿಕೇರಿಯ ಕೆನರಾ ಬ್ಯಾಂಕ್‌ ಮುಖ್ಯ ಶಾಖೆ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್‌ನ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದು, ಮೇ.20 ರಂದು ಮಧ್ಯಾಹ್ನ ಡಿವೈಎಸ್‌ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್‌ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೆ ಬಾರದೇ ಬೇರೆ ಬೇರೆ ಬ್ಯಾಂಕ್‌ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: Thirupathi Trip: ತಿರುಪತಿಗೆ ಹೋಗುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್! ಇಲ್ಲಿದೆ ಫುಲ್ ಡೀಟೇಲ್ಸ್

ಇದೀಗ ಡಿವೈಎಸ್‌ಪಿ ಬಿ.ಕೆ ಮುರುಳಿಧ‌ರ್ ಅವರು ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ಹಣವನ್ನು ಸೈಬ‌ರ್ ಕಳ್ಳರು ಎಗರಿಸಿದ್ದಾರೆ. ಸೈಬರ್ ಕಳ್ಳರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Leave A Reply

Your email address will not be published.