Bagalkot : ಅಂತ್ಯ ಸಂಸ್ಕಾರದ ವೇಳೆ ಕೆಮ್ಮಿದ ಮಗು !!

Bagalkot: ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಚಿತೆಯ ಮೇಲೆ ಇಟ್ಟ ಮಗುವೊಂದು ಮರು ಜೀವ ಪಡೆದು, ಕೆಮ್ಮಿ ತಾನು ಬದುಕಿದ್ದೇನೆ ಎಂಬುದನ್ನು ಖಚಿತಪಡಿಸಿದ ಅಪರೂಪದ ಘಟನೆಯೊಂದು ರಾಜ್ಯದಲ್ಲಿ ನಡೆದಿದೆ.

ಇದನ್ನೂ ಓದಿ: Gold Price: ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ! ಪ್ರತೀ 10 ಗ್ರಾಂಗೆ 1,000 ರೂ.ನಷ್ಟು ಇಳಿಕೆ!

ಬಾಗಲಕೋಟೆ ‌(Bagalkot) ಜಿಲ್ಲೆಯ ಇಳಕಲ್ನಲ್ಲಿ (Ilakal) ಗುರುವಾರ ಸಂಜೆ ಈ ವಿಚಿತ್ರ ವಿದ್ಯಮಾನ ನಡೆದಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ಎಂಬ ದಂಪತಿಯ ದ್ಯಾಮಣ್ಣ ಭಜಂತ್ರಿ ಎಂಬ 13 ತಿಂಗಳ ಹಸುಗೂಸು ಅಂತ್ಯಸಂಸ್ಕಾರದ ವೇಳೆ ಕೆಮ್ಮಿ ಎಲ್ಲರನ್ನೂ ಚಕಿತಗೊಳಿಸಿದೆ.

ಇದನ್ನೂ ಓದಿ: Udupi: ಹೆಚ್ಚಿದ ಮಳೆ; ಉಡುಪಿಯ ಸೇಂಟ್‌ ಮೇರಿಸ್‌ ದ್ವೀಪ ಪ್ರವೇಶಕ್ಕೆ ನಿರ್ಬಂಧ

ಅಷ್ಟಕ್ಕೂ ನಡೆದದ್ದೇನು?

ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಮಗು ಬಳಲುತ್ತಿದ್ದು ಹುಟ್ಟಿದಾಗಿನಿಂದ ಮಗು ಸಮಸ್ಯೆ ಎದುರಿಸುತ್ತಿತ್ತು. ಕಳೆದ ನಾಲ್ಕು ದಿನಗಳಿಂದ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕುವುದು ಕಷ್ಟ ಎಂದು ಹೇಳಿದ್ದರು. ಹೀಗಾಗಿ ಮಗುವನ್ನು ಪೋಷಕರು ಆಸ್ಪತ್ರೆಯಿಂದ ವಾಪಸ್ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಮಗು ಪ್ರಜ್ಞೆ ತಪ್ಪಿತ್ತು.

ಇದರಿಂದ ಮಗು ಸಾವನ್ನಪ್ಪಿದೆ ಎಂದು ಭಾವಿಸಿದ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅಷ್ಟರಲ್ಲಿ ಮಗು ಕೆಮ್ಮಿದ್ದು, ಇದರಿಂದ ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. ಇದನ್ನು ದೇವರ ಪವಾಡ ಎಂದು ಭಾವಿಸಿ ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದು ಮುರ್ತುಜಾ ಖಾದ್ರಿ ಪವಾಡ ಎಂದು ಭಾವಿಸಿ ಪೋಷಕರು ಮಗುವನ್ನು ದರ್ಗಾಕ್ಕೆ ಕರೆದೊಯ್ದು ನಂತರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವೈದ್ಯರು ಹೇಳಿದ್ದೇನು?

ಮಗು ಮೃತಪಟ್ಟಿದೆ ಎಂದು ಯಾವೊಬ್ಬ ವೈದ್ಯರೂ ಘೋಷಿಸಿರಲಿಲ್ಲ. ಮಗುವಿಗೆ ಪ್ರಜ್ಞೆ ತಪ್ಪಿತ್ತು ಅಷ್ಟೆ. ಸದ್ಯ ಮಗುವನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ಚಿಕಿತ್ಸೆ ನೀಡುತ್ತಿದ್ದೇವೆ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ. ಆದರೆ, ಆರೋಗ್ಯ ಸ್ಥಿತಿಯ ಬಗ್ಗೆ ಭರವಸೆ ನೀಡುವುದು ಕಷ್ಟ ಎಂದು ಇಳಕಲ್ ಖಾಸಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Leave A Reply

Your email address will not be published.