Puttur: ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Puttur: ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಕುರಿತು ವರದಿಯಾಗಿದೆ.

ಇದನ್ನೂ ಓದಿ: Driving Licence: ಲೈಸೆನ್ಸ್ ಗಾಗಿ ಡ್ರೈವಿಂಗ್ ಟೆಸ್ಟ್ ನೀಡಲು ಇನ್ಮುಂದೆ RTOಗೆ ಹೋಗಬೇಕಿಲ್ಲ – ಇಲ್ಲಿಗೆ ಹೋದರೆ ಸಾಕು !!

ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ.

ಆಲ್ಟೋ ಕಾರು ಮತ್ತು ಆಕ್ಟಿವಾ ನಡುವೆ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ಅಪಘಾತವೊಂದು ನಡೆದಿತ್ತು. ಆ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆ ರಾತ್ರಿ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತ ಹೊಂದಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Karnataka Rains: ಮಳೆಗೆ ಛತ್ರಿ ಹಿಡಿದು ಬಸ್ ಚಲಾಯಿಸಿದ KSRTC ಚಾಲಕ!

Leave A Reply

Your email address will not be published.