Raghupati Bhat: ಮಾಜಿ ಶಾಸಕ ರಘುಪತಿ ಭಟ್’ರನ್ನು ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ !!

Raghupati Bhat: ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎನ್ನುವ ಕಾರಣದಿಂದ ಬಿಜೆಪಿಯು(BJP) ಮಾಜಿ ಶಾಸಕ ರಘುಪತಿ ಭಟ್ ಅವರನ್ನು​ ಉಚ್ಚಾಟನೆ ಮಾಡಿದೆ. ಶನಿವಾರ ಕರ್ನಾಟಕ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ರಘುಪತಿ ಭಟ್(Raghupati Bhat) ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಏನಿದೆ?
ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್(Vidhana Parishath) ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಉಚ್ಛಾಟನೆಗೆ ಕಾರಣ:
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ್ದ ರಘುಪತಿ ಭಟ್ ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಪಕ್ಷವು ಶಿವಮೊಗ್ಗದ(Shivmogga) ಖ್ಯಾತ ವೈದ್ಯ ಧನಂಜಯ ಸರ್ಜಿ(Dhananjaya Sarji) ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿತು. ಈ ಹಿನ್ನೆಲೆಯಲ್ಲಿ ರಘುಪತಿ ಭಟ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೂ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಬಿಜೆಪಿ ಸೂಚಿಸಿತ್ತು. ಆದರೆ, ನಾಮಪತ್ರ ಹಿಂಪಡೆಯದೆ, ಪಕ್ಷದ ಮಾತನ್ನು ಕೂಡ ದಿಕ್ಕರಿಸಿ ಸ್ಪರ್ಧೆ ಮಾಡುತ್ತಿರುವ ರಘುಪತಿ ಭಟ್ ಅವರನ್ನು ಇದೀಗ ಉಚ್ಚಾಟನೆ ಮಾಡಲಾಗಿದೆ.

ಸತ್ತಾಗ ಬಿಜೆಪಿ ಬಾವುಟ ನನ್ನ ಮೇಲಿರಬೇಕು ಎಂದದ್ದರು ಭಟ್ರು:
2023ರ ವಿಧಾನಸಭೆ ಚುನಾವಣೆಯಲ್ಲಿ ಕೂಡ ರಘುಪತಿ ಭಟ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿತ್ತು. ಆಗ ಮಾತನಾಡಿದ್ದ ಅವರು ತಾನು ಬಿಜೆಪಿಯನ್ನು ಬಿಡುವುದಿಲ್ಲ, ನಾನು ಸತ್ತಾಗ ನನ್ನ ದೇಹದ ಮೇಲೆ ಬಿಜೆಪಿ ಬಾವುಟ ಇರಬೇಕು ಎಂದು ಹೇಳಿ ಬಿಜೆಪಿ ನಾಯಕರ ಮೆಚ್ಚುಗೆ ಪಾತ್ರವಾಗಿದ್ದರು. ಬಳಿಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಿಸಿತ್ತು.

Leave A Reply

Your email address will not be published.