Delhi Fire: ದೆಹಲಿಯ ಬೇಬಿ ಕೇರ್ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ; 7 ನವಜಾತ ಶಿಶುಗಳ ದಾರುಣ ಸಾವು

Delhi Fire: ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅಪಘಾತದಲ್ಲಿ 7 ನವಜಾತ ಶಿಶುಗಳು ದಾರುಣವಾಗಿ ಸಾವನ್ನಪ್ಪಿವೆ. ಶನಿವಾರ ರಾತ್ರಿ 11:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅನಂತರ ಈ ಭೀಕರ ಅವಘಡ ಸಂಭವಿಸಿದೆ. ವಿವಿಧ ಅಗ್ನಿಶಾಮಕ ಠಾಣೆಗಳಿಂದ ಒಂಬತ್ತು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮಾಡಿದೆ.

ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮಕ್ಕಳನ್ನು ಕೇಂದ್ರದಿಂದ ಸುರಕ್ಷಿತವಾಗಿ ಹೊರತರಲು ಆರಂಭಿಸಲಾಗಿದ್ದು, ಹಾಗೂ ಅಗ್ನಿಶಾಮಕ ಸಿಬ್ಬಂದಿ 12 ನವಜಾತ ಮಕ್ಕಳನ್ನು ರಕ್ಷಿಸಿದ್ದಾರೆ.

ದಿಲ್ಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ಮುಖ್ಯಸ್ಥ ಅತುಲ್ ಗರ್ಗ್ ಮಾತನಾಡಿ, ವಿವೇಕ್ ವಿಹಾರ್‌ನಲ್ಲಿರುವ ಐಐಟಿ, ಬ್ಲಾಕ್ ಬಿ ಬಳಿಯ ಮಕ್ಕಳ ಆರೈಕೆ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. “ಒಟ್ಟು ಒಂಬತ್ತು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ತಲುಪಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಮತ್ತು ಇದುವರೆಗೆ 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ” ಎಂದು ಹೇಳಿದ್ದಾರೆ.

ಮಾಹಿತಿಯ ಪ್ರಕಾರ, ಅಗ್ನಿಶಾಮಕ ದಳದ ತಂಡ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ 12 ಮಕ್ಕಳನ್ನು ರಕ್ಷಿಸಿದೆ. ಈ ಎಲ್ಲ ಮಕ್ಕಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಚಿಕಿತ್ಸೆ ವೇಳೆ 7 ಮಕ್ಕಳು ಸಾವನ್ನಪ್ಪಿದ್ದಾರೆ. ಐವರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. 120 ಚದರ ಗಜದಲ್ಲಿ ನಿರ್ಮಿಸಿರುವ ಅಡ್ವಾನ್ಸ್ಡ್ ಕೇರ್ ಆಸ್ಪತ್ರೆ ಶಿಶುಪಾಲನಾ ಕೇಂದ್ರದಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಸುಮಾರು 16 ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿವೆ.

Leave A Reply

Your email address will not be published.