ದರ್ಶನ್ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು!

ದರ್ಶನ್ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ( Actor Darshan ) ಪೊಲೀಸರ ಬಂಧನದಲ್ಲಿದ್ದಾರೆ. ಇದರ ನಡುವೆ ಕೋಠಿಮಠ ಶ್ರೀಗಳು ನಟ ದರ್ಶನ್ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಠಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಕೋಪದ ಕೈಗೆ ಬುದ್ಧಿ ಕೊಟ್ಟರೇ ಈ ರೀತಿಯ ಘಟನೆಗಳಿಗೆ ಸಾಕ್ಷಿಯಾಗುತ್ತದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದು,ನಟ ದರ್ಶನ್ ಕೋಪವೇ ರೇಣುಕಾಸ್ವಾಮಿ ಕೊಲೆಗೂ ಕಾರಣವಾಗಿರೋ ವಿಷಯವನ್ನು ಕೋಡಿಮಠ ಶ್ರೀಗಳು ಈ ರೀತಿ ಬಿಚ್ಚಿಟ್ಟಿದ್ದಾರೆ..

ಶ್ರಾವಣದಲ್ಲಿ ನಾನು ಮತ್ತೊಮ್ಮೆ ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.