Mandya: ಸುಮಲತಾ‌ರಿಂದ ಭಿಕ್ಷೆ ಹಾಕಿಸಿಕೊಂಡ ಮಗ’ ಎಂದು HD ಕುಮಾರಸ್ವಾಮಿಗೆ ನಿಂದನೆ, ದರ್ಶನ್ ಅಭಿಮಾನಿ ವಿರುದ್ಧ ಜೆಡಿಎಸ್ ದೂರು !

Mandya: ಮಂಡ್ಯ: ಚಿತ್ರದುರ್ಗದ ಅಭಿಮಾನಿ ರೇಣುಕಾಸ್ವಾಮಿಯ ಕೊಲೆ ಮಾಡಿದ ಆರೋಪದ ಮೇಲೆ ನಟ ದರ್ಶನ್ ರನ್ನು ಬಂಧಿಸಲಾಗಿದೆ. ಈಗ ನಟ ದರ್ಶನ್ ರ ಪರಮ ಮಹಿಳಾ ಅಭಿಮಾನಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರನ್ನು ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ದರ್ಶನ್ ಅಭಿಮಾನಿ ಮಂಗಳಾ ವಿರುದ್ಧ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್ ಎಂಬವರು ಈ ದೂರು ನೀಡಿದ್ದಾರೆ.

“ನಟ ದರ್ಶನ್ ಮೇಲೆ ಕೊಲೆ ಆರೋಪ ಬರುವಂತೆ ಹೆಚ್ .ಡಿ ಕುಮಾರಸ್ವಾಮಿ ಮಾಡಿದ್ದಾನೆ. ದುಡ್ಡು ಕೊಟ್ಟು ದರ್ಶನ್ ವಿರುದ್ದ ಧಿಕ್ಕಾರ ಕೂಗಿಸುತ್ತೀಯಾ? ಮಾಜಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ನಿನಗೆ ಸ್ಪರ್ಧಿಸಲು ಅವಕಾಶ ಕೊಟ್ಟಿರುವುದಕ್ಕೆ ಡಿ ಬಾಸ್ ವಿರುದ್ಧ ಸ್ಕೆಚ್ ಹಾಕುತ್ತೀಯಾ? ಸುಮಲತಾ‌ ಅವರಿಂದ ಭಿಕ್ಷೆ ಹಾಕಿಸಿಕೊಂಡ ಮಗ ನೀನು” ಎಂದು ಏಕವಚನದಲ್ಲಿ ಈ ದರ್ಶನ್ ಅಭಿಮಾನಿ ಮಂಗಳಾ ಎಂಬವರು ಜಾಲತಾಣದಲ್ಲಿ ನಿಂದಿಸಿದ್ದರು. ಈ ಹಿನ್ನಲೆಯಲ್ಲಿ ಮಂಗಳ ವಿರುದ್ಧ ಕುಪಿತ ಜೆಡಿಎಸ್ ಕಾರ್ಯಕರ್ತರು ಕೆ.ಆರ್. ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave A Reply

Your email address will not be published.