NEET NET Paper leak: NTA ಮುಖ್ಯಸ್ಥ ಸುಬೋಧ್ ಕುಮಾರ್ ವಜಾ, ನೀಟ್ ಮರು ಪ್ರವೇಶ ಪರೀಕ್ಷೆ ಮುಂದೂಡಿಕೆ

NEET NET Paper leak: ರಾತ್ರಿ ನಡೆದ ಮಹತ್ವದ ಬೆಳವಣಿಗೆಯಲ್ಲಿ 2024ನೇ ಸಾಲಿನ ನೀಟ್ ಹಾಗೂ ನೆಟ್ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ NTA ಡಿಜಿ ಸುಬೋಧ್ ಕುಮಾರ್ ರನ್ನು ವಜಾಗೊಳಿಸಲಾಗಿದ್ದು, ನಾಳೆ ನಡೆಯಬೇಕಿದ್ದ ನೀಟ್ ಪ್ರವೇಶ ಪರೀಕ್ಷೆಯನ್ನೂ ಕೂಡ ಮುಂದೂಡಿಕೆ ಮಾಡಲಾಗಿದೆ.

ನೀಟ್ ಪ್ರವೇಶ ಪರೀಕ್ಷೆ 2024 ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಕೇಂದ್ರ ಸರ್ಕಾರ ತಲೆ ಬಗ್ಗಿಸಿದ್ದು ಇದೀಗ ಮೊದಲ ತಲೆದಂಡವಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಡಿಜಿ ಸುಬೋಧ್ ಕುಮಾರ್ ಅವರನ್ನು ವಜಾಗೊಳಿಸಲಾಗಿದ್ದು, ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ.

ಕಳೆದೆರಡು ತಿಂಗಳುಗಳಲ್ಲಿ, ದೇಶದ 2 ದೊಡ್ಡ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ ಮತ್ತು ನೆಟ್ ಯುಜಿಸಿ ಪರೀಕ್ಷೆಯಲ್ಲಿ ಅಕ್ರಮಗಳು ಮತ್ತು ಪೇಪರ್ ಸೋರಿಕೆಗಳ ಕುರಿತು ಇದೀಗ ಎನ್ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನು ವಜಾಗೊಳಿಸಲಾಗಿದೆ. ಆ ಸ್ಥಾನಕ್ಕೆ ಪ್ರದೀಪ್ ಸಿಂಗ್ ಖರೋಲಾಗೆ NTA ಜವಾಬ್ದಾರಿ ವಹಿಸಲಾಗಿದೆ. ಪ್ರಸ್ತುತ ಖರೋಲಾ ಅವರು ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ಸಂಪಾದಕರಾಗಿದ್ದಾರೆ.

ನಿಯಮಿತ ಪದಾಧಿಕಾರಿಯನ್ನು ನೇಮಿಸುವವರೆಗೆ ಅಥವಾ ಮುಂದಿನ ಆದೇಶದವರೆಗೆ” NTA ಯ ಮಹಾನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ನೀಟ್, ನೆಟ್ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಗಿದೆ. ಈ ವೇಳೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹಾಗೇ ಮುಂದಿನ ವಿಚಾರಣೆಯನ್ನು, ಜುಲೈ 8ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಈ ಮಧ್ಯೆ ನಾಳೆಯ ನೀಟ್ ಪ್ರವೇಶ ಪರೀಕ್ಷೆ ಮುಂದೂಡಿಕೆ
ಇದೇ ವೇಳೆ ನಾಳೆ ನಡೆಯಬೇಕಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮರು ಪರೀಕ್ಷೆಯ ಹೊಸ ದಿನಾಂಕವನ್ನು ಆದಷ್ಟು ಬೇಗ ತಿಳಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಗೆ ಸಂಬಂಧಿಸಿದಂತೆ ಇತ್ತೀಚಿನ ಆರೋಪಗಳ ಕಾರಣದಿಂದ ನೀಟ್-ಪಿಜಿ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave A Reply

Your email address will not be published.