ನೀಟ್ ಪ್ರತಿಭಟನೆ ವೇಳೆ ಕುಸಿದು ಬಿದ್ದ ಸಂಸದೆ ಆಸ್ಪತ್ರೆಗೆ ದಾಖಲು! ಆಗಿದ್ದಾದರೂ ಏನು

ನೀಟ್ ಪ್ರತಿಭಟನೆ ವೇಳೆ ಕುಸಿದು ಬಿದ್ದ ಸಂಸದೆ ಆಸ್ಪತ್ರೆಗೆ ದಾಖಲು! ಆಗಿದ್ದಾದರೂ ಏನು

ನೀಟ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರಾಜ್ಯ ಸಭಾ ಸಂಸದೆ ಫುಲೊ ದೇವಿ ನೇತಮ್‌ ಸಂಸತ್‌ನೊಳಗೆ ಕುಸಿದು ಬಿದ್ದ ಘಟನೆ ನಡೆದಿದೆ. ಪ್ರತಿಭಟನೆ ವೇಳೆ ತಲೆತಿರುಗಿದಂತಾಗಿ ಕುಸಿದು ಬಿದ್ದ ಅವರನ್ನು ಕೂಡಲೇ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಯಿತು.

ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದವು ಆದರೆ ಇತ್ತ ಆಡಳಿತ ಪಕ್ಷವೂ ಮೊದಲಿಗೆ ರಾಷ್ಟ್ರಪತಿಗಳ ಭಾಷನದ ಮೇಲೆ ವಂದನಾ ನಿರ್ಣಯ ಸಲ್ಲಿಸಲು ಮುಂದಾಗಿದ್ದರಿಂದ ಸಿಟ್ಟಿಗೆದ್ದ ಪ್ರತಿಪಕ್ಷಗಳು ಗಲಾಟೆ ಮುಂದುವರೆಸಿದವು. ಹೀಗಾಗಿ ಸಂಸತ್ ಕಲಾಪವನ್ನು ಸೋಮವಾರ ಜುಲೈ 1ರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯ್ತು.

 

Leave A Reply

Your email address will not be published.